Home ಟಾಪ್ ಸುದ್ದಿಗಳು ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ.


ಬಿಎಸ್ ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.


ಬಿಎಸ್ ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ.


ಪ್ರತಿನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಯಡಿಯೂರಪ್ಪ ವಿರುದ್ಧ ಆರೋಪಿಸುತ್ತಿದ್ದಾರೆ. ಬಿಎಸ್ ವೈ ಶರಣಾಗಬೇಕು, ಜೈಲಿಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಮಧ್ಯಂತರ ಆದೇಶ ತೆರವುಗೊಳಿಸುತ್ತೇವೆ ಎನ್ನುತ್ತಿದ್ದಾರೆ. ಈಗ ನೋಡಿದರೆ ವಿಚಾರಣೆ ಮುಂದೂಡಿಕೆ ಕೇಳುತ್ತಿದ್ದಾರೆ. ಬರಲಿ ವಾದ ಮಂಡಿಸಲಿ, ಹಣೆಯಲ್ಲಿ ಬರೆದಿದ್ದರೆ ಜೈಲಿಗೆ ಹೋಗುತ್ತಾರೆ ಎಂದು ವಕೀಲ ನಾಗೇಶ್ ಸವಾಲು ಹಾಕಿದರು.
ಸಿಐಡಿ ಪರ ವಕೀಲರು, ಬಿಎಸ್ ವೈ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಆರೋಪಪಟ್ಟಿಯ ಪ್ರತಿ ಸಲ್ಲಿಸಲು ಕಾಲಾವಕಾಶ ಬೇಕಿದೆ ಎಂದು ಸಿಐಡಿ ಪರ ಎಸ್ ಪಿಪಿ ಅಶೋಕ್ ನಾಯ್ಕ್ ಮನವಿ ಮಾಡಿದರು. ಅಂತಿಮವಾಗಿ ವಿಚಾರಣೆ ಮುಂದೂಡಿಕೆಯಾಯಿತು.

Join Whatsapp
Exit mobile version