ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಯಡಿಯೂರಪ್ಪಹೈಕೋರ್ಟ್’ಗೆ ಮೊರೆ

Prasthutha|

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -


ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧದ ಅಂಶಗಳಿಲ್ಲದಿರುವುದರಿಂದ ಪ್ರಕರಣವನ್ನು ರದ್ದು ಪಡಿಸಬೇಕು ಎಂದು ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ತಮ್ಮ ಪುತ್ರಿಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮಹಿಳೆಯೊಬ್ಬರು ಬಿಎಸ್ ವೈ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.

Join Whatsapp