ದಾವಣಗೆರೆ: ವಿಷಾಹಾರ ಸೇವಿಸಿದ ಪರಿಣಾಮವಾಗಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.
ಮಕ್ಕಳು ಅಸ್ವಸ್ಥರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ವಸತಿ ಶಾಲೆ ಭೇಟಿ ನೀಡಿ ವಸತಿ ಶಾಲೆಯಲ್ಲಿನ ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
50ಕ್ಕೂ ಹೆಚ್ವು ಮಕ್ಕಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶುಕ್ರವಾರ ರಾತ್ರಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು ಸುಸ್ತಾಗಿದ್ದರು. ಕೂಡಲೇ ವಾಹನ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ.