ಪಿಒಕೆ ನಮ್ಮದು, ನಮ್ಮದೇ ಆಗಿರುತ್ತದೆ ಮತ್ತು ನಾವು ಅದನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ: ಅಮಿತ್ ಶಾ

Prasthutha|

ಪ್ರಯಾಗ್ ರಾಜ್: ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ವಾಪಸ್ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಾಕಿಸ್ತಾನ ಅಣುಬಾಂಬ್ ಹೊಂದಿರುವುದರಿಂದ ಅದಕ್ಕೆ ಗೌರವ ನೀಡಿ ಎಂದು ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳುತ್ತಾರೆ ಎಂದು ಟೀಕಿಸಿದರು.

ರಾಹುಲ್ ಬಾಬಾ..ಇಂದು ಪ್ರಯಾಗ್‌ರಾಜ್‌ನ ಪವಿತ್ರ ಭೂಮಿಯಿಂದ ಹೇಳುತ್ತೇನೆ, ಈ ಪಿಒಕೆ ನಮ್ಮದು, ನಮ್ಮದೇ ಆಗಿರುತ್ತದೆ ಮತ್ತು ನಾವು ಅದನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.



Join Whatsapp