ಪ್ರಯಾಗ್ ರಾಜ್: ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ವಾಪಸ್ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಾಕಿಸ್ತಾನ ಅಣುಬಾಂಬ್ ಹೊಂದಿರುವುದರಿಂದ ಅದಕ್ಕೆ ಗೌರವ ನೀಡಿ ಎಂದು ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳುತ್ತಾರೆ ಎಂದು ಟೀಕಿಸಿದರು.
ರಾಹುಲ್ ಬಾಬಾ..ಇಂದು ಪ್ರಯಾಗ್ರಾಜ್ನ ಪವಿತ್ರ ಭೂಮಿಯಿಂದ ಹೇಳುತ್ತೇನೆ, ಈ ಪಿಒಕೆ ನಮ್ಮದು, ನಮ್ಮದೇ ಆಗಿರುತ್ತದೆ ಮತ್ತು ನಾವು ಅದನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.