Home ಟಾಪ್ ಸುದ್ದಿಗಳು ಕೊಲೆ ಆರೋಪಿಗಳನ್ನು ಗುಂಡಿನ ದಾಳಿ ನಡೆಸಿ ಬಂಧಿಸಿದ ಪೊಲೀಸರು

ಕೊಲೆ ಆರೋಪಿಗಳನ್ನು ಗುಂಡಿನ ದಾಳಿ ನಡೆಸಿ ಬಂಧಿಸಿದ ಪೊಲೀಸರು

ದೊಡ್ಡಬಳ್ಳಾಪುರ: ಕ್ರಿಕೆಟ್ ಪಂದ್ಯಾಟದ ವೇಳೆ ಇಬ್ಬರು ಯುವಕರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡರೊಬ್ಬರು ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಇಬ್ಬರು ಯುವಕರು ಹತ್ಯೆಯಾಗಿದ್ದರು.

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರ ಪೊಲೀಸರು ನಗರದ ಹೊರವಲಯದ ರೈಲ್ವೆ ಕ್ರಾಸ್ ಬಳಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳಾದ ವಿನಯ್ ಮತ್ತು ತ್ರೀಮೂರ್ತಿ ಕಾಲಿಗೆ ಶೂಟ್​ ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಗಳ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಹರೀಶ್​ರವರು ಪೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version