ಸರಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಶಾಂತಿಯುತ ಪ್ರತಿಭಟನೆಯಲ್ಲಿ ನಿರತರಾಗಿದ್ದ ವಿಧ್ಯಾರ್ಥಿಗಳ ಮೇಲೆ ಸರಕಾರೀ ಪ್ರೇರಿತ ಪೋಲೀಸ್ ದಾಳಿಯನ್ನು ನ್ಯಾಷನಲ್ ವಿಮೆನ್ಸ್ ಫ್ರಂಟ್ ತೀವ್ರವಾಗಿ ಖಂಡಿಸಿದೆ.
ಬಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾಗೂ ದೇಶದ ಹಿತಾಸಕ್ತಿಗೆ ಮಾರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂವಿಧಾನಬಧ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಧ್ಯಾರ್ಥಿನಿಯರು ಪೊಲೀಸ್ ದೌರ್ಜನ್ಯದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಧ್ಯಾರ್ಥಿನಿಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸರ್ಕಾರವು ‘ಭೇಟಿ ಭಚಾವೊ, ಭೇಟಿ ಪಡಾವೊ’ ಎಂಬ ಘೋಷ ವಾಕ್ಯದಡಿ ಏನನ್ನು ಸಾರುತ್ತಿದೆ? . ಹೆಣ್ಣು ಎಂಬ ದಯೆಯಿಲ್ಲದೆ ಅಮಾನುಷವಾಗಿ ನಡೆದುಕೊಂಡ ಪೋಲೀಸರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಕೈಗೊಂಡು ವಿಧ್ಯಾರ್ಥಿ, ವಿಧ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕೆಂದು ಸಂಘಟನೆಯು ಆಗ್ರಹಿಸಿದೆ. ಶಿಕ್ಷಣವನ್ನು ಕೇಸರೀಕರಣಗೊಳಿಸುವ, ಬಂಡವಾಳಶಾಹಿಗಳ ತೆಕ್ಕೆಗೆ ಒಪ್ಪಿಸುವ NEP ಯನ್ನು ತರಾತುರಿಯಲ್ಲಿ ಜಾರಿಗೊಳಿಸುವ ಸರಕಾರದ ನೀತಿಯ ಬಗ್ಗೆ ಈಗಾಗಲೇ ಹಲವು ಶಿಕ್ಷಣ ತಜ್ಞರು, ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಕೂಡಲೇ NEP ಯನ್ನು ರದ್ದುಗೊಳಿಸಬೇಕೆಂದು ನ್ಯಾಷನಲ್ ವಿಮೆನ್ಸ್ ಫ್ರಂಟ್ ರಾಜ್ಯಾಧ್ಯಕ್ಷೆ ಝೀನತ್ ಬಂಟ್ವಾಳ ಒತ್ತಾಯಿಸಿದ್ದಾರೆ.