ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ COD ತನಿಖೆಗೆ

Prasthutha: January 1, 2022

ಉಡುಪಿ: ಕೋಟತಟ್ಟುವಿನಲ್ಲಿ ಕೊರಗರ ಮೇಲಿನ  ಪೊಲೀಸ್ ದೌರ್ಜನ್ಯ ವಿರುದ್ಧ ದೂರು ದಾಖಲಿಸಿರುವ ಪ್ರಕರಣದ ತನಿಖೆಯನ್ನು ಸಿಒಡಿಗೆ ನೀಡುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಕೋಟತಟ್ಟುವಿನ ಕೊರಗ ಸಮುದಾಯದ ಮನೆಗೆ ಭೇಟಿ ನೀಡಿದ ಅವರು, ಪೊಲೀಸರು ದೂರು ದಾಖಲಿಸಿದ 6 ಮಂದಿಗೆ ತಲಾ 2 ಲಕ್ಷ ಪರಿಹಾರ ನೀಡುವ ಘೋಷಣೆ ಮಾಡಿದರು ಹಾಗೂ ಸ್ಥಳದಲ್ಲಿ ಯೇ ಮೊದಲ ಕಂತಾಗಿ‌ 50,000 ಸಾವಿರ ರೂ. ಚೆಕ್ ನ್ನು 6 ಮಂದಿಗೆ ವಿತರಿಸಿದರು.

ಈ ಕುರಿತು ಮಾತನಾಡಿದ ಅವರು,ಕೊರಗ ಸಮುದಾಯವರು ಹೆದರುವ ಅಗತ್ಯ ಇಲ್ಲ ಸರಕಾರ ಹಾಗೂ ಅಧಿಕಾರಿಗಳು ನಿಮ್ಮ ಜೊತೆಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕೆರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ  ಎಂದು ಭರವಸೆ ನೀಡಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!