ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: ದೇಶಾದ್ಯಂತ ‘ರಾಜಭವನ ಚಲೋಗೆ’ ಕಾಂಗ್ರೆಸ್ ನಿರ್ಧಾರ

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತತ ಮೂರು ದಿನಗಳಿಂದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ದೆಹಲಿ, ಕರ್ನಾಟಕ, ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಡಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ, ಮೃಗೀಯ ರೀತಿಯ ವರ್ತನೆ ತೋರಿದೆ ಎಂದು ಆರೋಪಿಸಿರುವ ಕಾಂಗ್ರೆಸ್. ದೇಶವ್ಯಾಪಿ ರಾಜಭವನ ಚಲೋಗೆ ನಿರ್ಧಾರ ಕೈಗೊಂಡಿದೆ.

- Advertisement -

ಪ್ರತಿಭಟನಾಕಾರರ ಮೇಲೆ ಪೊಲೀಸ್ ದಬ್ಬಾಳಿಕೆ ಹಾಗೂ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪೊಲೀಸ್ ಕಾರ್ಯಾಚರಣೆಗಳನ್ನು ಖಂಡಿಸಿ ದೇಶದಾದ್ಯಂತ ರಾಜಭವನಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ನುಗ್ಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪೊಲೀಸ್ ದೌರ್ಜನ್ಯದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ.



Join Whatsapp