ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಉಳ್ಳಾಲದ ಕೋಟೆಪುರ ಪ್ರದೇಶದ ಮರಳು ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದುದರ ಖಚಿತ ಮಾಹಿತಿಯನ್ನು ಪಡೆದ ಪೋಲಿಸರು ಇಂದು ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಕೋಟೆಪುರ ನಿವಾಸಿ ಶಾರುಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು . ಹದಿನೈದು ಮಂದಿಯ ಮೇಲೆ FIR ದಾಖಲಿಸಲಾಗಿದೆ.
ದಾಳಿ ವೇಳೆ ಅಕ್ರಮ ಮರಳುಗಾರಿಕೆಗೆ ಬೆಂಗಾವಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.