ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು

Prasthutha|

ಉಡುಪಿ: ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.

- Advertisement -


2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ.


2023ರ ನವೆಂಬರ್ ನಲ್ಲಿ ಶ್ರೀಮತಿಯನ್ನು ಕೇರಳದಲ್ಲಿ ಅರೆಸ್ಟ್ ಮಾಡಲಾಗಿತ್ತು. ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಶ್ರೀಮತಿ ಸೆರೆಯಾಗಿದ್ದಳು.

- Advertisement -


ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.

Join Whatsapp