ನಾಯಿ ದಾಳಿಯಿಂದ ಯುವತಿಯನ್ನು ರಕ್ಷಿಸಿದ ಸ್ಥಳೀಯರ ವಿರುದ್ಧವೇ ಪ್ರಕರಣ ದಾಖಲಿಸಿದ ಪೊಲೀಸರು

Prasthutha|

ಕಲ್ಲಿಕೋಟೆ: ಕೇರಳದ ಕಲ್ಲಿಕೋಟೆಯ ತಾಮರಶ್ಶೇರಿಯಲ್ಲಿ ನಾಯಿಯಿಂದ ದಾಳಿಗೊಳಗಾದ ಯುವತಿಯನ್ನು ರಕ್ಷಿಸಿದ ಸ್ಥಳೀಯರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ನಾಯಿಯ ಮಾಲೀಕ ರೋಶಿನ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಾಮರಶ್ಶೇರಿ ಪೊಲೀಸರು 20 ಸ್ಥಳೀಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರೋಶಿನ್ ಅವರ ಕಾರಿಗೆ ಬೆಂಕಿ ಹಚ್ಚಲು ಯತ್ನಿಸಿದ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿದೆ.

ನಾಯಿಯಿಂದ ಯುವತಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ರೋಶಿನ್ ತಮ್ಮತ್ತ ಗನ್ ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಾಯಿ ಕಡಿತಕ್ಕೆ ಒಳಗಾದ ಯುವತಿ ಸದ್ಯ ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮುಖ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
https://prasthutha.com/wp-content/uploads/2021/11/WhatsApp-Video-2021-11-16-at-4.49.32-PM-1.mp4

Join Whatsapp
Exit mobile version