ಮುಂಬೈ: ‘ದಿ ಕಾಶ್ಮೀರ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಭೋಪಾಲಿ ಎಂದರೆ ಸಲಿಂಗಕಾಮಿ ಎಂಬ ಹೇಳಿಕೆ ವಿವಾದಕ್ಕೀಡಾಗಿದ್ದು, ಮಾನನಷ್ಟ ಮತ್ತು ಇತರೆ ಆರೋಪಗಳಿಗಾಗಿ ಪ್ರಕರಣ ದಾಖಲಿಸುವಂತೆ ಕೋರಿ ದೂರು ನೀಡಲಾಗಿದೆ.
ಹಿರಿಯ ಪತ್ರಕರ್ತ, ಖ್ಯಾತ ಸಾರ್ವಜನಿಕ ಸಂಪರ್ಕ ವ್ಯವಸ್ಥಾಪಕ ರೋಹಿತ್ ಪಾಂಡೆ ಅವರ ಪರವಾಗಿ ವಕೀಲ ಅಲಿ ಕಾಶಿಫ್ ಖಾನ್ ದೇಶ್ ಮುಖ್ ಮೂಲಕ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ದಿ ಕಾಶ್ಮೀರ ಫೈಲ್ಸ್’ ನಿರ್ದೇಶಕ ವಿವೇಕ್ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಭೋಪಾಲಿಗಳನ್ನು ಸಲಿಂಗಕಾಮಿಗಳು ಎಂದು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶದಿಂದ ಕರೆಯುವ ಮೂಲಕ ಭೋಪಾಲ್’ಗೆ ಅವಮಾನ, ಅಗೌರವ ತೋರಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ, 153 ಬಿ, 295 ಎ, 298. ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರಿ ದೂರು ನೀಡಲಾಗಿದೆ.