ನವದೆಹಲಿ: ಪಕ್ಷದ ಕಾರ್ಯಕರ್ತರ ಮೇಲಿನ ಪೊಲೀಸ್ ದಬ್ಬಾಳಿಕೆ ಹಾಗೂ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪೊಲೀಸ್ ಕಾರ್ಯಾಚರಣೆಗಳನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಗುರುವಾರ ರಾಜಭವನ ಮುಂಭಾಗ ಪ್ರತಿಭಟನೆ ನಡೆಸಲು ಮುಂದಾಗಿದೆ.
ರಾಹುಲ್ ಗಾಂಧಿಯವರನ್ನು ಸತತ ಮೂರುಗಳ ಕಾಲ ಇಡಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ ದೆಹಲಿಯ ಇ.ಡಿ. ಕಚೇರಿ ಹಾಗೂ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇ.ಡಿ. ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.
ರಾಜಭನ ಚಲೋ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ರಾಜ್ಯದ ಎಲ್ಲಾ ಶಾಸಕರು, ಮಾಜಿ ಶಾಸಕರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಎಲ್ಲರೂ ಬೆಂಗಳೂರಿಗೆ ಆಗಮಿಸಬೇಕೆಂದು ಮನವಿ ಮಾಡುತ್ತೇನೆ. ನಾಳೆ ಬೆಳಿಗ್ಗೆ 10 ಗಂಟೆಗೆಯ ಒಳಗೆ ಕಾಂಗ್ರೆಸ್ ಕಚೇರಿಗೆ ಆಗಮಿಸಿ, ಕಾಲ್ನಡಿಗೆ ಮೂಲಕ ನಾವು ರಾಜಭವನಕ್ಕೆ ತೆರಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೀಡಿಯೋ ಮೂಲಕ ಮನವಿ ಮಾಡಿದ್ದಾರೆ.