ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬೀಳಲಿದೆ ಬ್ರೇಕ್: ಜಲಪಾತಗಳ ಬಳಿ ಪೊಲೀಸರ ನಿಯೋಜನೆ

Prasthutha|

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್ ಬೀಳಲಿದ್ದು, ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ ಸೌಂದರ್ಯ ವೀಕ್ಷಣೆಗೆ ಅವಕಾಶ ಇಲ್ಲದಿದ್ದರೂ ಪ್ರವಾಸಿಗರು ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ವೀಕ್ಷಣೆಗೆ ತೊಡಗುತ್ತಿದ್ದು, ಅಗಲ ಕಿರಿದಾದಾಗ ಘಾಟಿ ಪರಿಸರದಲ್ಲಿ ಸಾಲು ಸಾಲು ವಾಹನಗಳು ನಿಲುಗಡೆಗೊಳ್ಳುವುದರಿಂದ ಟ್ರಾಫಿಕ್ ಜಾಮ್‌ನಿಂದಾಗಿ ಸುಗಮ ಸಂಚಾರಕ್ಕೆ ಭಾರಿ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ಬಳಿ ಹೈವೇ ಪ್ಯಾಟ್ರೋಲ್ ಪೊಲೀಸರನ್ನು ನಿಯೋಜಿಸಲಾಗಿದೆ.

ಜಲಪಾತ, ತೊರೆಗಳ ಪ್ರದೇಶದಲ್ಲಿ ಅಪಾಯಕಾರಿ ಸ್ಥಳಗಳನ್ನು ಏರಿ ಇಳಿಯುವುದು, ಕಲ್ಲುಬಂಡೆಗಳನ್ನು ಹತ್ತುವುದು, ತಡೆಗೋಡೆ, ರಸ್ತೆ ಮಧ್ಯೆ ನಿಂತು ಸೆಲ್ಫಿ ಕ್ಲಿಕ್ಕಿಸುವ ಪ್ರವಾಸಿಗರು ರಸ್ತೆ ಮಧ್ಯದಲ್ಲಿ ನಿಂತು ನೃತ್ಯ ಮಾಡುತ್ತಿದ್ದು, ಇತರ ವಾಹನಗಳಿಗೆ ಸವಾಲಾಗಿದ್ದಾರೆ. ಘಾಟಿ ಪ್ರದೇಶದಲ್ಲಿ ನಡೆಯುತ್ತಿರುವ ಈ ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇಡೀ ದಿನ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.



Join Whatsapp