ಸಿದ್ದರಾಮಯ್ಯ ಕಾರಿಗೆ ಮತ್ತೆ ಮೊಟ್ಟೆ ಎಸೆತ, ಕಲ್ಲು ಎಸೆಯಲು ಮುಂದಾದವರನ್ನು ವಶಕ್ಕೆ ಪಡೆದ ಪೊಲೀಸರು

Prasthutha|

ಮಡಿಕೇರಿ: ಕೊಡಗಿನ ಮಳೆ ಹಾನಿ ಪ್ರದೇಶಗಳ ಭೇಟಿಗಾಗಿ ಜಿಲ್ಲೆಗೆ ಆಗಮಿಸಿರುವ ಮಾಜಿ ಸಿ.ಎಂ ಸಿದ್ದರಾಮಯ್ಯ ಕುಶಾಲನಗರ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಸಂದರ್ಭ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಈ ನಡುವೆ ಕೆಲವರು ಕಲ್ಲು ಎಸೆಯಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದರು. ಇದರಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು.

- Advertisement -

ಕುಶಾಲನಗರ ಸಮೀಪದ ಗುಡ್ಡೆಹೊಸೂರಿಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿ ಸಾವರ್ಕರ್ ಭಾವಚಿತ್ರ ಹಿಡಿದು ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದರು.

ಈ ಸಂದರ್ಭ ಪ್ರತಿಭಟನಕಾರರು, ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು. ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Join Whatsapp