ಪೊಲೀಸರಿಂದ ಬೀದರ್ ಶಾಹಿನ್ ಸ್ಕೂಲ್ ನ ಮಕ್ಕಳ ವಿಚಾರಣೆ: ಹೈಕೋರ್ಟ್ ಗರಂ

Prasthutha|

ಬೆಂಗಳೂರು: ಬೀದರ್ ನ ಶಾಹಿನ್ ಸ್ಕೂಲ್ ನ ವಿದ್ಯಾರ್ಥಿಗಳನ್ನು ಪೊಲೀಸರು ಸಮವಸ್ತ್ರದೊಂದಿಗೆ ಆಗಮಿಸಿ ವಿಚಾರಣೆ ನಡೆಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಇಂತಹ ಪೊಲೀಸರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿದೆ.

- Advertisement -


ಪೊಲೀಸರು ಸಮವಸ್ತ್ರದೊಂದಿಗೆ ಶಾಲಾ ವಿದ್ಯಾರ್ಥಿಗಳನ್ನು ಪ್ರಶ್ನಿಸುವ ಮೂಲಕ ಬಾಲ ನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ.


ಶಾಹಿನ್ ಶಾಲೆಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ವಿವಾದಾತ್ಮಕ ನಾಟಕ ಮಾಡಿಸಲಾಗಿತ್ತು ಎಂಬ ಆರೋಪದಲ್ಲಿ ಮುಖ್ಯ ಶಿಕ್ಷಕಿಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಪೊಲೀಸರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ ಬಾಲ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

Join Whatsapp