Home ಕರಾವಳಿ ಸರ್ಕಾರದ ಆದೇಶ ಉಲ್ಲಂಘಿಸಿ ಜಾತ್ರೋತ್ಸವ | ಉಳ್ಳಾಲ ಸೋಮೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ...

ಸರ್ಕಾರದ ಆದೇಶ ಉಲ್ಲಂಘಿಸಿ ಜಾತ್ರೋತ್ಸವ | ಉಳ್ಳಾಲ ಸೋಮೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲು !

►ಬ್ರಹ್ಮ ಕಲಶೋತ್ಸವದಲ್ಲಿ ನೂರಾರು ಮಂದಿ ಭಾಗಿ !

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ  ಉಳ್ಳಾಲದ ಸೋಮೇಶ್ವರ ದೇವಸ್ಥಾನ ಆಡಳಿತ ಸಮಿತಿಯು ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನದ ಜಾತ್ರೋತ್ಸವ ನಡೆಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸದಸ್ಯರ ವಿರುದ್ದ ಪ್ರಕರಣ ದಾಖಲಾಗಿದೆ.

ಸೋಮೇಶ್ವರ ದೇವಸ್ಥಾನದಲ್ಲಿ ಈಗ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದೆ. ಹೀಗಾಗಿ ನಿನ್ನೆ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು. ಆದರೆ ಈ ಕುರಿತು ಮುನ್ನೆಚ್ಚರಿಕೆಯಾಗಿ ಮೂರು ದಿನಗಳ ಹಿಂದೆಯೇ ಮಂಗಳೂರು ತಹಶಿಲ್ದಾರ್ ದೇವಸ್ಥಾನಕ್ಕೆ ನೋಟೀಸ್ ನೀಡಿದ್ದರು. ಆದರೆ ಅದನ್ನು ಗನನೆಗೆ ತೆಗೆದುಕೊಳ್ಳದೆ ದೇವಸ್ಥಾನ ಆಡಳಿತ ಸಮಿತಿಯು ಸಾರ್ವಜನಿಕ ಮೆರವಣಿಗೆ ನಡೆಸಿತ್ತು. ಇದೀಗ ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ  ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸರ್ಕಾರದ ಆದೇಶ ಉಲ್ಲಂಘಿಸಿ ಜಾತ್ರೋತ್ಸವ | ಉಳ್ಳಾಲ ಸೋಮೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ  ಪ್ರಕರಣ ದಾಖಲು !
Join Whatsapp
Exit mobile version