ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ| ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

Prasthutha: June 25, 2021

ಬೆಂಗಳೂರು: BBMP ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ.  

ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಇಬ್ಬರೂ ಕೃತ್ಯದ ಬಳಿಕ ಪರಾರಿಯಾಗಿದ್ದರು. ಆರೋಪಿಗಳು ಸುಮನಹಳ್ಳಿ ಬಳಿ ತಲೆಮರೆಸಿಕೊಂಡಿದ್ದ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಮನವಿ ಮಾಡಿದಾಗ ಶರಣಾಗದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದಂತೆಯೇ ತಕ್ಷಣ ಪೊಲೀಸರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಇಬ್ಬರನ್ನು ಬಂಧಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ