ಬೆಂಗಳೂರು: BBMP ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ.
ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಇಬ್ಬರೂ ಕೃತ್ಯದ ಬಳಿಕ ಪರಾರಿಯಾಗಿದ್ದರು. ಆರೋಪಿಗಳು ಸುಮನಹಳ್ಳಿ ಬಳಿ ತಲೆಮರೆಸಿಕೊಂಡಿದ್ದ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಮನವಿ ಮಾಡಿದಾಗ ಶರಣಾಗದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದಂತೆಯೇ ತಕ್ಷಣ ಪೊಲೀಸರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಇಬ್ಬರನ್ನು ಬಂಧಿಸಿದ್ದಾರೆ.