Home ಟಾಪ್ ಸುದ್ದಿಗಳು ಹಿಂದುತ್ವ ಮುಖಂಡರಂತೆ ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ

ಹಿಂದುತ್ವ ಮುಖಂಡರಂತೆ ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ

ವಿಜಯಪುರ: ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ ಮತ್ತು ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿದೆ.


ಕನ್ಯ್ಪೂಜ್ ಆಗಬೇಡಿ..! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್ ಎಂಬ ಸಾಲುಗಳೊಂದಿಗೆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.


ಈ ಬಗ್ಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಆಯುಧಪೂಜೆ ನಿಮಿತ್ತ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಸಂಘಟನೆಗಳ ಮುಖಂಡರಂತೆ ಪೊಲೀಸ್ ಅಧಿಕಾರಿ , ಸಿಬ್ಬಂದಿ ಧಿರಿಸು ತೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು .


ಇನ್ನು ಕಾಪು ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೂಡ ಹಿಂದು ಸಂಘಟನೆಯ ಮುಖಂಡರಂತೆ ಕೇಸರಿ ಬಟ್ಟೆ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಫೋಟೋ ತೆಗೆಸಿದ್ದರು. ಇದು ಕೂಡ ಸಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.

Join Whatsapp
Exit mobile version