ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅಮಾನತು

Prasthutha|

ಬೆಂಗಳೂರು: ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರನ್ನು ದಾಖಲು ಮಾಡಿ ಜೈಲು ಸೇರುವಂತೆ ಮಾಡಲು ಸಹಕರಿಸಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -


ಈ ಕುರಿತು ವರದಿಗಳು ಬಂದ ತಕ್ಷಣವೇ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ನಿರ್ದೇಶಿಸಿದ್ದರು. ಅದರಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಪ್ರವೀಣ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.



Join Whatsapp