ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಮೃತ್ಯು

Prasthutha|

ಕೆ.ಆರ್.ಪುರಂ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿದ್ದ ಕೆ.ಆರ್.ಪುರಂ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

- Advertisement -

ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರಿಲೆಳೆದಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಕೆಆರ್ ಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ.

ನಂದೀಶ್ ಮೂಲತಃ ಮೈಸೂರಿನ ಹುಣಸೂರು ಮೂಲದವರಾಗಿದ್ದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರ ಸಂಬಂಧಿ ಎನ್ನಲಾಗಿದೆ. ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ತೆರೆದಿದ್ದರೂ ಅವರ ವಿರುದ್ಧ ಕ್ರಮಕೈಗೊಂಡಿಲ್ಲ ಎಂಬ ಆರೋಪದಲ್ಲಿ ನಂದೀಶ್ ಅವರನ್ನು ಅಮಾನತು ಮಾಡಲಾಗಿತ್ತು.

- Advertisement -

 ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಅದಾದ ನಂತರ ಆನೇಕಲ್ ನಲ್ಲಿ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾಗ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು.

Join Whatsapp