Home ಟಾಪ್ ಸುದ್ದಿಗಳು ಬೀದರ್ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ

ಬೀದರ್ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕೆ ದೇಶದ್ರೋಹ ಆರೋಪದಡಿ ಬೀದರ್‌ ನ ಶಾಹಿನ್‌ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ರಾಜ್ಯ ಸರಕಾರವು ಹೈಕೋರ್ಟ್‌ ಗೆ ಮಾಹಿತಿ ನೀಡಿದೆ. ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಸೌತ್ ಇಂಡಿಯಾ ಫಾರ್ ಹೂಮನ್ ರೈಟ್ಸ್ ಎಜುಕೇಷನ್ ಆ್ಯಂಡ್ ಮಾನಿಟರಿಂಗ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ರಿತುರಾಜ್ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಅಲ್ಲದೆ, ಈ ರೀತಿಯ ಘಟನೆ ಭವಿಷ್ಯದಲ್ಲಿ ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ. ಮಕ್ಕಳ ವಿಚಾರಣೆ ಸಂದರ್ಭದಲ್ಲಿ ಕಾಯಿದೆಯ ನ್ಯಾಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Join Whatsapp
Exit mobile version