ಶಿವಾಜಿ ಪ್ರತಿಮೆಗೆ ಕಪ್ಪುಮಸಿ: ರಾತ್ರೋರಾತ್ರಿ ಸಂಘಪರಿವಾರದಿಂದ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ
Prasthutha: December 18, 2021

ಬೆಳಗಾವಿ: ಶಿವಾಜಿ ಪ್ರತಿಮೆಗೆ ಕಪ್ಪುಮಸಿ ಬಳಿದಿರುವುದನ್ನು ಖಂಡಿಸಿ ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಸಂಘಪರಿವಾರದ ಕಾರ್ಯಕರ್ತರು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ, ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಏಕಾಏಕಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಜೀಪ್ ಗಾಜು ಪುಡಿ ಪುಡಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದಾರೆ.
ಅಹಿತಕರ ಘಟನೆ ನಡೆಯದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪ್ರತಿಭಟನಗಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
