ಪಂಜಾಬ್: ಗಾಯಕ ಸಿಧು ಮೂಸಾವಾಲಾ ಅಂತ್ಯಕ್ರಿಯೆ ವೇಳೆ ಪೊಲೀಸರಿಂದ ಲಾಠಿ ಚಾರ್ಜ್

Prasthutha|

ಪಂಜಾಬ್: ಗಾಯಕ ಸಿಧು ಮೂಸಾವಾಲಾ ಅಂತ್ಯಕ್ರಿಯೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸಿಧು ನಿವಾಸದ ಹೊರಗೆ ಜಮಾಯಿಸಿದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಇಂಡಿಯನ್ ಎಕ್ಸ್’ಪ್ರೆಸ್ ವರದಿ ಮಾಡಿದೆ.

- Advertisement -


ಸಿಧು ಮೂಸಾವಾಲಾ ಅಂತ್ಯಸಂಸ್ಕಾರಕ್ಕಾಗಿ ಮಾನಸ ಜಿಲ್ಲೆಯ ಮೂಸಾ ಗ್ರಾಮದಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳು ಸೇರಿದ್ದು, ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿರುವ ಅಭಿಮಾನಿಗಳು ಸಿಧು ಕೊಲೆಗಾರರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.


ಈ ಮೊದಲು, ಸಿಧು ಮೃತದೇಹವನ್ನು ಮಾನಸದ ಸಿವಿಲ್ ಆಸ್ಪತ್ರೆಯ ಶವಾಗಾರದಿಂದ ಇಂದು ಬೆಳಿಗ್ಗೆ 8.45 ಕ್ಕೆ ಅವರ ನಿವಾಸಕ್ಕೆ ತರಲಾಯಿತು. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಸಿಧುಗೆ 24 ಗುಂಡುಗಳನ್ನು ಹಾರಿಸಲಾಗಿತ್ತು ಎನ್ನಲಾಗಿದೆ, ಸಿಧು ಅಂತ್ಯಕ್ರಿಯೆಯನ್ನು ಅವರ ಕೃಷಿ ಜಮೀನಿನಲ್ಲಿ ನಡೆಸಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಮತ್ತು ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

Join Whatsapp