ಅನಧಿಕೃತ ಮೈಕ್ ಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ ಆರಂಭ

Prasthutha|

ಬೆಂಗಳೂರು: ದೇವಾಲಯ, ಮಸೀದಿ ಹಾಗೂ ಚರ್ಚ್ಗಳಲ್ಲಿ ಮೈಕ್ ಸಕ್ರಮಕ್ಕೆ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಅಂತ್ಯವಾಗಿದ್ದು ಇಂದಿನಿಂದ ಅನಧಿಕೃತ ಮೈಕ್ ಗಳ ತೆರವು ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಅಕ್ರಮವಾಗಿ ಮೈಕ್ ಗಳನ್ನು ಹಾಕಿ ಶಬ್ದ ಮಾಲಿನ್ಯ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮವನ್ನು ಪೊಲೀಸರು ಕೈಗೊಳ್ಳಲಿದ್ದಾರೆ.

- Advertisement -


ಮಸೀದಿ, ಮಂದಿರ ಹಾಗೂ ಚರ್ಚ್ಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ 900ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು ಅದರಲ್ಲಿ 121 ಅರ್ಜಿ ವಿಲೇವಾರಿ ಮಾಡಿ ಪೊಲೀಸರು ಅನುಮತಿ ನೀಡಿದ್ದಾರೆ. ಕೋರ್ಟ್ ಆದೇಶ ಹಾಗೂ ಸರ್ಕಾರದ ಸೂಚನೆಗಳ ಅನುಸಾರವಾಗಿ ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp