ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೊಲೆ ಸಂಚು: ವಿಚಾರಣೆಗೆ ಹಾಜರಾಗುವಂತೆ ಗೋಪಾಲಕೃಷ್ಣಗೆ ಪೊಲೀಸ್ ನೋಟಿಸ್

Prasthutha: December 3, 2021

ಬೆಂಗಳೂರು: ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರಿಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ಜಾರಿಗೊಳಿಸಲಾಗಿದೆ.


ಎಸ್.ಆರ್.ವಿಶ್ವನಾಥ್ ಅವರ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧ ನಿನ್ನೆ ಮಧ್ಯಾಹ್ನ ರೌಡಿ ಕುಳ್ಳ ದೇವರಾಜ್ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿರುವ ಗ್ರಾಮಾಂತರ ಪೊಲೀಸರು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರಿಗೆ ಹಾಜರಾಗುವಂತೆ ನೋಟೀಸ್ ಜಾರಿಗೊಳಿಸಿದ್ದಾರೆ.


ಪ್ರಕರಣದ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಲಾಗಿದ್ದು ಅವರು ನೀಡುವ ವಿವರ ಹಾಗೂ ಸಂಚಿನಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಂಡು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಾಂತರ ಎಸ್ಪಿ ಕೋನ ವಂಶಿಕೃಷ್ಣ ಹೇಳಿದರು.


ಕೊಲೆ ಸಂಚಿಗೆ ಸಂಬಂಧಿಸಿದಂತೆ ಶಾಸಕ ವಿಶ್ವನಾಥ್ ದೂರು ನೀಡಿದ್ದರು. ದೂರಿನ ಅನ್ವಯ ಶಾಸಕ ವಿಶ್ವನಾಥ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಕೆಲವು ಸಾಕ್ಷಿಗಳನ್ನು ಶಾಸಕರು ಕೊಟ್ಟಿದ್ದು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಡಿವೈಎಸ್ಪಿ ನಾಗರಾಜ್ ಅವರ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದ್ದು, ಕುಳ್ಳ ದೇವರಾಜ್ ನನ್ನು ಬಂಧಿಸಿ ನ್ಯಾಯಾಲಯ ಹಾಜರುಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದರು.


ವಿಶ್ವನಾಥ್ ಅವರು ನೀಡಿರುವ 32 ಜಿಬಿ ಪೆನ್ ಡ್ರೈವ್ ನಲ್ಲಿದ್ದ ವಿಡಿಯೋವನ್ನು ಆರೋಪಿತ ಕುಳ್ಳ ದೇವರಾಜ್ ಮುಂದೆಯೇ ವಿಡಿಯೋ ಫ್ಲೇ ಮಾಡಿ ಹೇಳಿಕೆ ಪಡೆಯಲಾಗಿದೆ. ಈ ವಿಚಾರಣೆಯನ್ನು ವಿಡಿಯೋ ಸಹ ಮಾಡಲಾಗಿದೆ. ಆರೋಪಿಯ ಹೇಳಿಕೆಯ ಮೇಲೆ ಗೋಪಾಲಕೃಷ್ಣರನ್ನು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!