►ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದಂತೆಯೇ ಅಕ್ರಮವಾಗಿ ಮೈಕ್ ವಶಪಡಿಸಿಕೊಂಡಿದ್ದ ಪೊಲೀಸರು!
ಬೆಂಗಳೂರು: ಬೆಂಗಳೂರಿನ ಕೆಲವು ಮಸೀದಿಗಳಲ್ಲಿ ಇದ್ದ ಧ್ವನಿವರ್ಧಕಗಳನ್ನ ಪೊಲೀಸರು ತೆರೆವುಗೊಳಿಸಿದ್ದು, ಹೈಕೋರ್ಟಿನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಯುತ್ತಿರುವಾಗಲೇ ಪೊಲೀಸರ ಈ ನಡೆಯಿಂದಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತೆರವುಗೊಳಿಸಿದ್ದ ಧ್ವನಿವರ್ಧಕಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
ಮಸೀದಿಗಳಲ್ಲಿ ಬೆಳಗಿನ ಜಾವ ಧ್ವನಿವರ್ಧಕ ಹಾಕುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಲಾಗಿದ್ದು ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಸಂಬಂಧದ ರಿಟ್ ಪಿಟಿಷನ್ 4574/2021 ರಲ್ಲಿ ಈ ಬಗ್ಗೆ ವಿಚಾರಣೆ ಇನ್ನೂ ಬಾಕಿ ಇದೆ. ಈ ನಡುವೆಯೇ ಪೊಲೀಸರು ಧ್ವನಿವರ್ಧಕಗಳನ್ನು ತೆರವುಗೊಳಿಸಿದ್ದರು.
ಇದರ ವಿರುದ್ಧ ಉನ್ನತ ಅಧಿಕಾರಿಗಳನ್ನು ಭೇಟಿಯಾದ ಸಿದ್ದಾಪುರ ಆಲ್ ಮಸ್ಜಿದ್ ಕಮಿಟಿ ಮತ್ತು ಜಯನಗರ ಮಸ್ಜಿದ್ ಫೆಡರೇಶನ್ ಸೇರಿದಂತೆ ಹಲವು ಸಂಘಟನೆಗಳು ತನಿಖೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತೆರವುಗೊಳಿಸಿದ್ದ ಧ್ವನಿವರ್ಧಕಗಳನ್ನು ಪೊಲೀಸರು ಹಿಂದಿರುಗಿಸಲು ಮುಂದಾಗಿದ್ದಾರೆ.
ಈ ನಡುವೆ ಪೊಲೀಸರು ಧ್ವನಿವರ್ಧಕಗಳನ್ನು ತೆರವುಗೊಳಿಸಿದ್ದರಿಂದಾಗಿ ಸಿದ್ದಾಪುರ ಪರಿಸರದ ಮಸೀದಿಗಳಲ್ಲಿ ಆಝಾನ್ ಕರೆ ಕೊಡಲು ಸಮಸ್ಯೆ ಉಂಟಾಗುವುದನ್ನು ಮನಗಂಡ ಎಸ್ಡಿಪಿಐ ಮಾಜಿ ಕಾರ್ಪೊರೇಟರ್ ಮುಜಾಹಿದ್ ಪಾಶಾ ಅವರು ಐದು ಮಸೀದಿಗಳಿಗೆ ಧ್ವನಿವರ್ಧಕಗಳನ್ನು ಒದಗಿಸಿದ್ದಾರೆ.