ಉಳ್ಳಾಲ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಇಂದು ನಡೆದಿದೆ.
ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ.
ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.