ಮೂಡಬಿದಿರೆ: ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವು

Prasthutha|

ಮೂಡಬಿದಿರೆ: ಮೂಡಬಿದಿರೆ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪೊಲೀಸ್  ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

- Advertisement -

ಸಂತೋಷ್ (35) ಮೃತಪಟ್ಟ ಪೊಲೀಸ್ ಸಿಬ್ಬಂದಿ ಎಂದು ಗುರುತಿಸಲಾಗಿದೆ.

ಈ ಕುರಿತು ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ “ಪೊಲೀಸ್ ಕುಟುಂಬದ ಕಿರಿಯ ಸದಸ್ಯರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂತೋಷ್ ಅವರು ಕೊನೆಯುಸಿರೆಳೆದಿದ್ದು, ಅವರ ಆತ್ಮಕೆ ಶಾಂತಿ ಸಿಗಲಿ ” ಎಂದು ಕಂಬನಿ ಮಿಡಿದಿದ್ದಾರೆ.

Join Whatsapp