ರಾತ್ರೋ ರಾತ್ರಿ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ದಾಳಿ: 17 ಮೊಬೈಲ್, ಗಾಂಜಾ ವಶ

Prasthutha|

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ 17 ಮೊಬೈಲ್, ಗಾಂಜಾ, ಬಿಡಿ ಹಾಗೂ ಸಿಗರೇಟ್ ಅನ್ನು ವಶಪಡಿಸಿಕೊಂಡಿದ್ದಾರೆ.

- Advertisement -


ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದ ಮೇಲೆ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ತಮ್ಮಯ್ಯ ಹಾಗೂ ಇನ್ಸ್ ಪೆಕ್ಟರ್ ರೇವಣ್ಣ ನೇತೃತ್ವದಲ್ಲಿ 60 ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮುಂಜಾನೆಯವರೆಗೂ ಜೈಲಿನ ಕೊಠಡಿಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ.


ಈ ವೇಳೆ ಜೈಲಿನಲ್ಲಿರುವ ಆರೋಪಿಗಳು ಹಾಗೂ ಖೈದಿಗಳ ಬಳಿ ಮೊಬೈಲ್ ಫೋನ್ ಗಳು ಹಾಗೂ ಗಾಂಜಾ ಪತ್ತೆಯಾಗಿದೆ. ಅಲ್ಲದೇ ಜೈಲಿನೊಳಗೆ ಮೊಬೈಲ್, ಗಾಂಜಾ ಪೂರೈಕೆ ಮಾಡುತ್ತಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Join Whatsapp