ಅಕ್ರಮ ಕಳ್ಳಭಟ್ಟಿ ಅಡ್ಡೆಗೆ ಪೊಲೀಸ್ ದಾಳಿ

Prasthutha|

ಚಿಕ್ಕಮಗಳೂರು: ಅಕ್ರಮ ಕಳ್ಳಭಟ್ಟಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿರುವ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆವೂರಿನಲ್ಲಿ ನಡೆದಿದೆ.


ಮಾರಾಟ ಮಾಡುವ ಉದ್ದೇಶದಿಂದ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಕಳ್ಳಭಟ್ಟಿ ತಯಾರಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇರೆಗೆ ಆಲ್ದೂರು ಪೊಲೀಸ್ ಠಾಣೆ ಪಿ.ಎಸ್.ಐ. ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರನ್ನು ನೋಡಿದ ಕಳ್ಳಭಟ್ಟಿ ಬೇಯಿಸುತ್ತಿದ್ದ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸ್ಥಳದಲ್ಲಿ ದೊರೆತ 10 ಲೀಟರ್ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -