Home ಟಾಪ್ ಸುದ್ದಿಗಳು ಬೆಳ್ಳಂಬೆಳಗ್ಗೆ ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟ...

ಬೆಳ್ಳಂಬೆಳಗ್ಗೆ ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಪೊಲೀಸರು ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳಿಗೆ ಶಾಕ್ ನೀಡಿದ್ದು, ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ಸುಮಾರು 180 ರೌಡಿಶೀಟರ್ ಗಳ ಮನೆಗಳ ಮೇಲೆ ಶೋಧ ನಡೆಸಿದ್ದಾರೆ.


ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಡ್ರಗ್ಸ್ ಪೆಡ್ಲರ್‌ಗಳ ರೌಡಿಶೀಟರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿಯೂ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದೆ.

ಮೂಲಗಳ ಪ್ರಕಾರ ಬೆಂಗಳೂರಿನ ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಕಾಟನ್‌ಪೇಟೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯ ಡ್ರಗ್ಸ್ ಪೆಡ್ಲರ್‌ಗಳ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರಿಂದ ದಾಳಿ ನಡೆದಿದೆ. ಸುಮಾರು 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version