ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದ ಪೊಲೀಸರ ತಂಡ ಭಾನುವಾರ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದೆ
ಸುಮಾರು 250 ಮಂದಿ ಪೊಲೀಸರು ಏಕಕಾಲಕ್ಕೆ ಜೈಲಿಗೆ ಆಗಮಿಸಿ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಸಿಪಿ ಅಂಶುಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಈ ವೇಳೆ ಮೊಬೈಲ್ ಮತ್ತಿತರ ವಸ್ತುಗಳು ತೊರೆತಿವೆ ಎಂದು ತಿಳಿದುಬಂದಿದೆ.
ಮಂಗಳೂರು ಜೈಲಿಗೆ ಪೊಲೀಸ್ ದಿಢೀರ್ ದಾಳಿ: ತಪಾಸಣೆ
Prasthutha|