Home ಟಾಪ್ ಸುದ್ದಿಗಳು ಇ-ಸಿಗರೇಟ್‌ಗಳ ಅಡ್ಡೆ ಮೇಲೆ ಪೊಲೀಸ್ ದಾಳಿ; ಕೇರಳ ಮೂಲದ ಕೆಲವರು ಪೊಲೀಸ್ ವಶ

ಇ-ಸಿಗರೇಟ್‌ಗಳ ಅಡ್ಡೆ ಮೇಲೆ ಪೊಲೀಸ್ ದಾಳಿ; ಕೇರಳ ಮೂಲದ ಕೆಲವರು ಪೊಲೀಸ್ ವಶ

ಬೆಂಗಳೂರು: ನಿಷೇಧಿತ ಇ-ಸಿಗರೇಟ್‌ಗಳ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ-ಸಿಗರೇಟ್‌ ಜಪ್ತಿ ಮಾಡಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಇ-ಸಿಗರೇಟ್‌ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಆದರೆ ಬೆಂಗಳೂರಲ್ಲಿ ಮಾತ್ರ ಇನ್ನೂ ಇ-ಸಿಗರೇಟ್‌ ಅಕ್ರಮ ಮಾರಾಟ ಜೋರಾಗಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕೇರಳ ಮೂಲದ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.


ಇ- ಸಿಗರೇಟ್‌ಗಳನ್ನು ವೇಪ್ಸ್, ವೇಪ್ ಪೆನ್, ಹುಕ್ಕ ಪೆನ್, ಇ-ಸಿಗಾರ್, ಇ- ಪೈಪ್ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ. ಇವುಗಳನ್ನು ಇ- ದ್ರವವನ್ನು ಉಪಯೋಗ ಮಾಡಿಕೊಂಡು ಏರ್ ಸಾಲ್‌ಗಳನ್ನು ಉತ್ಪತ್ತಿ ಮಾಡಲಾಗುತ್ತದೆ. ಪ್ರೊಪಿಲೀನ್, ಗ್ಲೈಕಾಲ್, ಗ್ಲಿಸರಿನ್ ಮುಂತಾದ ಪರಿಮಳಸೂಸುವ ವಸ್ತುಗಳನ್ನು ಬಳಕೆ ಮಾಡಲಾಗುತ್ತದೆ.‌

Join Whatsapp
Exit mobile version