ಜೂಜಾಟದ ಅಡ್ಡೆಗೆ ಪೊಲೀಸ್ ದಾಳಿ: ಐವರ ಬಂಧನ

Prasthutha|

ಹಾಸನ : ತಾಲೂಕಿನ ಗವೇನಹಳ್ಳಿ ಗ್ರಾಮದ ಬಳಿ ಅಕ್ರಮ ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸಿದ ಹಾಸನ ಪೊಲೀಸರು ಆರೋಪಿಗಳ ಬಳಿಯಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಸುರೇಶ್, ಸೂರ್ಯನಾರಾಯಣ, ವಸಂತ್ ಕುಮಾರ್, ಯೋಗೇಶ್, ನಾಗೇಶ್ ಬಂಧಿತ  ಆರೋಪಿಗಳು. ಜೂಜಾಟಕ್ಕೆ ಬಳಸಿದ 3680 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಜನರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿಯೊಂದಿಗೆ   ಕಾರ್ಯಾಚರಣೆ ನಡೆಸಿರುವ ಪೊಲೀಸರು ಯಶಸ್ವಿಯಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

- Advertisement -

ಸಾರ್ವಜನಿಕರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಈ ರೀತಿಯ ಚಟುವಟಿಕೆಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಘಟನೆ ಬಗ್ಗೆಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp