ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಸಿಎಂ ಮಮತಾ ಬ್ಯಾನರ್ಜಿ ಅವರ ಸುದ್ದಿಗಳಿಗೆ ಹಾಗೂ ಅವರು ಮಾಡಿದ ಪೋಸ್ಟ್ಗಳಿಗೆ ಈಶ್ವರಪ್ಪ ಮುನಿಯಪ್ಪ ಎಂಬ ಟ್ವಿಟರ್ ಖಾತೆಯಲ್ಲಿ ಅವಾಚ್ಯವಾಗಿ ಸಾಲು ಸಾಲು ಪೋಸ್ಟ್ ಮಾಡಲಾಗಿದೆ.
ಸದ್ಯ ಆರೋಪಿ ಪತ್ತೆಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.