ಹಾಸನ: ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಮೈಸೂರಿನ ಬಳ್ಳೆ ಸಾಕಾನೆ ಶಿಬಿರಕ್ಕೆ ಮೃತ ಅರ್ಜುನ ಆನೆಯನ್ನು ಕೊಂಡೊಯ್ಯಲು ಮಾವುತರು ಒತ್ತಾಯಿಸಿದರೆ, ಇತ್ತ ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡಲು ಆಗ್ರಹಿಸಿದ್ದರು. ಇದಕ್ಕೆ ಒಪ್ಪದ ಅರಣ್ಯ ಅಧಿಕಾರಿಗಳು, ಮೃತಪಟ್ಟ ಸ್ಥಳವಾದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿಯೇ ಅಂತ್ಯಕ್ರಿಯೆ ನಡೆಸಲು ಜೆಸಿಬಿ ಮೂಲಕ ಗುಂಡಿ ತೆಗೆಸುತ್ತಿದ್ದಾರೆ.
ಹಾಸನ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಿದ್ದು, ಪೊಲೀಸ್ ಇಲಾಖೆಯ ಸಿಬ್ಬಂದಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದ್ದಾರೆ.