Home ಟಾಪ್ ಸುದ್ದಿಗಳು ಪ್ರತಿಭಟನೆ ನಿರತನ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪೊಲೀಸ್ ಸಬ್ ಇನ್ಸ್’ಪೆಕ್ಟರ್: ಕಠಿಣ ಕ್ರಮಕ್ಕೆ ಆಗ್ರಹ

ಪ್ರತಿಭಟನೆ ನಿರತನ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪೊಲೀಸ್ ಸಬ್ ಇನ್ಸ್’ಪೆಕ್ಟರ್: ಕಠಿಣ ಕ್ರಮಕ್ಕೆ ಆಗ್ರಹ

ಬಳ್ಳಾರಿ: ಪ್ರತಿಭಟನಾ ನಿರತನ ಮೇಲೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬಳ್ಳಾರಿಯ ಕುರಗೋಡು ಎಂಬಲ್ಲಿ ನಡೆದಿದೆ.

ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಅಧಿಕಾರಿಯ ನಡೆಗೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿದ್ದ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಅವರು ಪ್ರತಿಭಟನಾ ನಿರತ ಗಂಗಾಧರ್ ಎಂಬಾತನ ಮೇಲೆ ಸಾರ್ವಜನಿಕ ಮತ್ತು ಪೊಲೀಸರ ಸಮ್ಮುಖದಲ್ಲೇ ಕೈಯಿಂದ ಹಲ್ಲೆ ನಡೆಸಿದ ಬಳಿಕ ಅವ್ಯಾಚ ಶಬ್ದಗಳಿಂದ ಹೀಯಾಳಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಈ ಮಧ್ಯೆ ಪ್ರತಿಭಟನಾ ನಿರತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಇನ್ಸ್’ಪೆಕ್ಟರ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Join Whatsapp
Exit mobile version