ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

Prasthutha|

ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ.

- Advertisement -

ಡಿ.ಆರ್ ಪೊಲೀಸ್ ಪೇದೆ ಕಿರಣ್ ಮೃತಪಟ್ಟ ವ್ಯಕ್ತಿ. ಕಿರಣ್ ಕರ್ತವ್ಯ ನಿರತ ವೇಳೆ ಕುತ್ತಿಗೆಗೆ ಗುಂಡು ಹಾರಿಸಿಕೊಂ ಡಿದ್ದಾರೆ. ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ.

ಮೃತ ಪೇದೆ ಕಿರಣ್, ಕಳೆದ 20 ವರ್ಷಗಳಿಂದ ಡಿ.ಆರ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಐದಾರು ವರ್ಷಗಳಿಂದ ಸಂಸಾರದಲ್ಲಿ ಕಲಹ ಏರ್ಪಟ್ಟಿತ್ತು. ಪತ್ನಿ ವಿಚ್ಛೇದನಕ್ಕೆ ಮುಂದಾಗಿದ್ದಳು. ಬರುವ ಆದಾಯದಲ್ಲಿ ಅರ್ಧದಷ್ಟು ಪತ್ನಿ ಹಾಗೂ ಮಕ್ಕಳ ಜೀವನೋಪಾಯಕ್ಕೆ ಕೊಡುವಂತೆ ಕೋರ್ಟ್ ಆದೇಶವಾಗಿತ್ತು ಎನ್ನಲಾಗುತ್ತಿದೆ. ತಾನು ಯಾಕೆ ಅರ್ಧ ವೇತನ‌ ನೀಡಬೇಕು ಎಂದು ಮಾನಸಿಕವಾಗಿ ಕುಗ್ಗಿಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.



Join Whatsapp