ಸಂಘಪರಿವಾರದ ಸಂಘಟನೆ ವಿರುದ್ಧ ಕ್ರಮಕೈಗೊಳ್ಳದಂತೆ ಪೊಲೀಸರ ಕೈ ಕಟ್ಟಿ ಹಾಕಲಾಗಿದೆ: ರಾಮಲಿಂಗಾ ರೆಡ್ಡಿ

Prasthutha|

ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು ಎಂದರೆ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಟ್ಟುನಿಟ್ಟಿನ ಅಧಿಕಾರಿಗಳನ್ನು ನಿಯೋಜಿಸಬೇಕು. ನಮ್ಮಲ್ಲಿ ಉತ್ತಮ ಅಧಿಕಾರಿಗಳಿದ್ದು, ದಕ್ಷ ಅಧಿಕಾರಿಗಳಿಗೆ ಯಾವುದೇ ಕೊರತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಕೋಮುಗಲಭೆ ನಿಯಂತ್ರಿಸಲು ಹೇಳಿದರೆ ಅವರು ನಿಭಾಯಿಸುತ್ತಾರೆ. ಆದರೆ ಬಿಜೆಪಿ ಸರ್ಕಾರ ತಮ್ಮ ಸಂಘಪರಿವಾರದ ಸಂಘಟನೆಗಳಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಹೀಗಾಗಿ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುತ್ತಾರೆ. ಹಿಜಾಬ್, ಹಲಾಲ್ ಕಟ್ ಸೇರಿದಂತೆ ಅನೇಕ ವಿಚಾರವಾಗಿ ಈ ಸಂಘಟನೆಗಳು ಸಾಕಷ್ಟು ಗೊಂದಲ ಸೃಷ್ಟಿಸಿದರು. ಸರ್ಕಾರ ಇವರನ್ನು ನಿಯಂತ್ರಿಸುವ ಕೆಲಸ ಮಾಡಲಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿದ್ದರೆ ಕಾನೂನು ಸುವ್ಯವಸ್ಥೆ ನಾಶವಾಗುತ್ತದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ವಿರೋಧ ಪಕ್ಷದಲ್ಲಿ ಇದ್ದಾಗ SDPI ನಿಷೇಧ ಆಗಬೇಕು ಎಂದು ಹೇಳುತ್ತಿದ್ದರು, ಈಗ ಅವರದೇ ಸರ್ಕಾರ ಇದ್ದರೂ ನಿಷೇಧ ಮಾಡುತ್ತಿಲ್ಲ. SDPI ಮೂಲಕ ಕಾಂಗ್ರೆಸ್ ಮತ ವಿಭಜನೆ ಮಾಡಬಹುದು ಎಂಬ ಕಾರಣಕ್ಕೆ ಬಿಜೆಪಿಯವರೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆ ಇದ್ದರೂ ಅವುಗಳನ್ನು ನಿಷೇಧಿಸಲಿ. ಸರ್ಕಾರ ಈ ಸಂಘಟನೆಗಳನ್ನು ನಿಯಂತ್ರಣದಲ್ಲೂ ಇಟ್ಟುಕೊಳ್ಳುತ್ತಿಲ್ಲ, ನಿಷೇಧಿಸುತ್ತಲೂ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

- Advertisement -

ಈ ಎಲ್ಲ ಸಂಘರ್ಷಕ್ಕೆ ಈ ಸಂಘಟನೆಗಳು ಎಷ್ಟು ಕಾರಣವಾಗಿವೆಯೋ, ಅಷ್ಟೇ ಆರ್ ಎಸ್ಎಸ್ ಸಂಘಪರಿವಾರದ ಸಂಘಟನೆಗಳೂ ಕಾರಣ. ಈ ವಿಚಾರವಾಗಿ ವಿಚಾರವಾಗಿ ನಾನು ಪುಸ್ತಕವನ್ನೇ ಬಿಡುಗಡೆ ಮಾಡಿ, ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

Join Whatsapp