Home ಟಾಪ್ ಸುದ್ದಿಗಳು ಪ್ರಾರ್ಥನಾ ಮಂದಿರಗಳಲ್ಲಿ ಎಲ್ಲಾ ಚಟುವಟಿಕೆ ನಡೆಸಲು ಅವಕಾಶ

ಪ್ರಾರ್ಥನಾ ಮಂದಿರಗಳಲ್ಲಿ ಎಲ್ಲಾ ಚಟುವಟಿಕೆ ನಡೆಸಲು ಅವಕಾಶ

ಬೆಂಗಳೂರು: ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆದರೆ ಜಾತ್ರೆ, ದೇವಸ್ಥಾನದ ಮಹೋತ್ಸವ, ಮೆರವಣಿಗೆ, ಸಮಾವೇಶ ನಡೆಸಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಾರ್ಥನಾ ಮಂದಿರ (ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಮತ್ತು ಇತರ ಧಾರ್ಮಿಕ ಸ್ಥಳಗಳು)ಗಳನ್ನು ತೆರೆಯಲು ಮತ್ತು ಎಲ್ಲಾ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್ 19 ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.

ಅದೇ ರೀತಿ ಅಮ್ಯೂಸ್ ಮೆಂಟ್ ಪಾರ್ಕ್, ಮತ್ತು ಇದೇ ರೀತಿಯ ಸ್ಥಳಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಜಲಕ್ರೀಡೆ, ನೀರಿನಲ್ಲಿ ನಡೆಸುವ ಸಾಹಸ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Join Whatsapp
Exit mobile version