ರಾಜಕೀಯ ಕದನಗಳನ್ನು ರಣರಂಗದಲ್ಲಿಯೇ ನಡೆಸಬೇಕು: ಡಿಕೆಶಿ

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರ ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆ ಅಂತ್ಯವಾಗಿದೆ.

- Advertisement -


ವಿಚಾರಣೆ ಮುಗಿಸಿಕೊಂಡು ಡಿಕೆ ಶಿವಕುಮಾರ್ ಹೊರಬರುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. BJP ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ED ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು BJPಗೆ ಅರಿವಾಗಬೇಕಿದೆ ಎಂದು ಕಿಡಿಕಾರಿದ್ದಾರೆ. ಇನ್ನು ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸಹೋದರರು. ಹತ್ತು ವರ್ಷದ ಆಸ್ತಿ ದಾಖಲೆಗಳನ್ನು ಕೇಳಿದ್ದಾರೆ. ಎಲ್ಲವನ್ನು ಇಡಿ ಕಚೇರಿಗೆ ಸಲ್ಲಿಸಲಿದ್ದೇವೆ. ಕರೆದಾಗ ಬರಬೇಕು ಎಂದು ಹೇಳಿದ್ದಾರೆ. ಮುಂದಿನ ವಿಚಾರಣೆ ದಿನಾಂಕ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.



Join Whatsapp