Home ಟಾಪ್ ಸುದ್ದಿಗಳು ಜಾತಿ, ಧರ್ಮಗಳ ಆಧಾರದಲ್ಲಿ ಮತ ಯಾಚಿಸಬೇಡಿ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಜಾತಿ, ಧರ್ಮಗಳ ಆಧಾರದಲ್ಲಿ ಮತ ಯಾಚಿಸಬೇಡಿ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಜಾತಿ, ಧರ್ಮ ಮತ್ತು ಭಾಷೆಗಳ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸಬೇಡಿ ಎಂದು ಕೇಂದ್ರ ಚುನಾವಣಾ ಆಯೋಗವು ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ.

’ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಗುರುದ್ವಾರ ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ನೀತಿಸಂಹಿತೆ ಉಲ್ಲಂಘಿಸಿದರೆ ಅಭ್ಯರ್ಥಿಗಳು ಮತ್ತು ಪ್ರಚಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.’ ಎಂದು ತಿಳಿಸಿದೆ. ‘ವಿಷಯಾಧರಿತ ಚರ್ಚೆಗಳ ಮೂಲಕ ಚುನಾವಣಾ ಪ್ರಚಾರವನ್ನು ನಡೆಸಬೇಕು. ಪಕ್ಷಗಳು ಮತ್ತು ಅದರ ನಾಯಕರು ಆಧಾರ ರಹಿತ ಮತ್ತು ಜನರ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡುವಂತಿಲ್ಲ’ ಎಂದು ತಿಳಿಸಿದೆ.

Join Whatsapp
Exit mobile version