ರಾಜಕೀಯ ಟ್ವಿಸ್ಟ್: ರಾಜೀನಾಮೆ ಹಿಂಪಡೆಯುವ ಸುಳಿವು ನೀಡಿದ ನವಜೋತ್ ಸಿಂಗ್ ಸಿಧು

Prasthutha|

ನವದೆಹಲಿ: ಪಂಜಾಬ್ ನ ಭವಿಷ್ಯ ಮತ್ತು ಅಭಿವೃದ್ಧಿ ವಿಷಯದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂಬ ಕಾರಣ ನೀಡಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಸೆ. 28 ರಂದು ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಇನ್ನೂ ಹಲವು ಕಾಂಗ್ರೆಸ್ ನಾಯಕರು ನವಜೋತ್ ಸಿಂಗ್ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ನಾನು ರಾಜೀನಾಮೆಯಿಂದ ಹಿಂದೆ ಸರಿಯುವುದಿಲ್ಲ ಎಂದೇ ಹೇಳಿಕೆ ನೀಡಿದ್ದ ಸಿಧು ಇಂದು ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದು ನಿನ್ನೆ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವ ಸೂಚನೆ ನೀಡಿದ್ದಾರೆ.

- Advertisement -

ಈ ಮೂಲಕ ಪಂಜಾಬ್ ಕಾಂಗ್ರೆಸ್ನಲ್ಲಿ ಉಂಟಾಗಿರುವ ಆಂತರಿಕ ಕಲಹ ಕೊಂಚ ಮಟ್ಟಿಗೆ ಶಮನವಾಗಿರುವ ಸೂಚನೆಗಳು ಕಾಣುತ್ತಿವೆ. ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಮತ್ತೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್ ಹೇಳಿಕೆ ನೀಡಿದ್ದಾರೆ. ಈಗ ಎಲ್ಲ ಗೊಂದಲಗಳು ಶಮನವಾಗಿವೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಮುಂದುವರಿಯಲಿದ್ದಾರೆ. ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು ಕಾಂಗ್ರೆಸ್ನಿಂದ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಗಳಿವೆ.

Join Whatsapp