ಮುಂಬೈ: ರಾಜಕೀಯದಲ್ಲಿ ಶಾಶ್ವತ ಶತ್ರು ಅಥವಾ ಮಿತ್ರರಿರುವುದಿಲ್ಲ, ಹಾಗಾಗಿ ಜನರ ಸಮಸ್ಯೆಗಳನ್ನು ಪರಿಹರಿಸಲು ಬಿಜೆಪಿ ಮತ್ತು ಶಿವಸೇನೆಯ ಶಿಂಧೆ ಬಣದ ಮೈತ್ರಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಜನರ ಸಮಸ್ಯೆಗಳನ್ನು ಆಲಿಸಲು ಮಹಾಯುತಿಗೆ ಸೇರಿದ್ದೇನೆ, ಎಲ್ಲಾ ಜಾತಿ ಮತ್ತು ಧರ್ಮದ ಜನರನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಬೀಡಿನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅಜಿತ್ ಪವಾರ್, ಜನರ ಸಮಸ್ಯೆ ಪರಿಹರಿಸಲು ನಾವು ಮಹಾಯುತಿ (ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಅಜಿತ್ ಪವಾರ್ ಮೈತ್ರಿ) ಸೇರಿಕೊಂಡಿದ್ದೇವೆ, ನಾವು ರಾಜ್ಯದ ಅಭಿವೃದ್ಧಿಗಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ರಾಜಕೀಯದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ. ಮಹಾಯುತಿ ಮೈತ್ರಿಕೂಟದಲ್ಲಿದ್ದರೂ ಎಲ್ಲ ಜಾತಿ, ಧರ್ಮದ ಜನರನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಮಹಾರಾಷ್ಟ್ರದ ಜನತೆಗೆ ಹೇಳುತ್ತೇನೆ ಎಂದು ಹೇಳಿದ್ದಾರೆ.