Home ಟಾಪ್ ಸುದ್ದಿಗಳು ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ನಿರ್ಧಾರ ಅನಿವಾರ್ಯ: ಬೊಮ್ಮಾಯಿ

ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ನಿರ್ಧಾರ ಅನಿವಾರ್ಯ: ಬೊಮ್ಮಾಯಿ

ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ. ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ ಎಂದು ಮಾಜಿ ಸಿಎಂ ಬೊಮ್ಮಾಯಿ ಮೈತ್ರಿ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ. ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ಮುಂದುವರಿದರೆ ರಾಜ್ಯ ಅಧೋಗತಿಗೆ ಹೋಗುತ್ತೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ ಎಂದರು.
ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ ಇದೆ. ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರ್ತಾ ಇವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

Join Whatsapp
Exit mobile version