Home ಟಾಪ್ ಸುದ್ದಿಗಳು ಮಣಿಪುರ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಆರಂಭ

ಮಣಿಪುರ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಆರಂಭ

ಇಂಫಾಲ: ಮಣಿಪುರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಶನಿವಾರ ಆರಂಭವಾಗಿದೆ. ರಾಜ್ಯದ ಆರು ಜಿಲ್ಲೆಗಳ 22 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಮಣಿಪುರ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ 1,247 ಮತಗಟ್ಟೆಗಳಿವೆ. ಈ ಹಂತದಲ್ಲಿ ಒಟ್ಟು 8.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಕೋವಿಡ್ ಪಾಸಿಟಿವ್ ಅಥವಾ ಕ್ವಾರಂಟೈನ್‌ ನಲ್ಲಿರುವ ಮತದಾರರಿಗೆ ಮಧ್ಯಾಹ್ನ 3 ರಿಂದ ಸಂಜೆ 4 ರ ನಡುವೆ ಕೊನೆಯ ಗಂಟೆಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಮಣಿಪುರ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾರ್ಚ್ 10 ರಂದು ಪ್ರಕಟವಾಗಲಿದೆ.

ಇಬ್ಬರು ಮಹಿಳೆಯರು ಸೇರಿದಂತೆ 92 ಅಭ್ಯರ್ಥಿಗಳು ಕಣದಲ್ಲಿದ್ದು, ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಅವರ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

ಮಣಿಪುರವು ಒಟ್ಟು ಅರವತ್ತು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಫೆಬ್ರವರಿ 28 ರಂದು ನಡೆದ ಮೊದಲ ಹಂತದ ಮತದಾನದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ.

ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಗಿದ್ದು,  ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ

Join Whatsapp
Exit mobile version