ರಾಜಸ್ಥಾನದಲ್ಲಿ ಮತದಾನ ಆರಂಭ: ಪೊಲೀಸ್ ಬಿಗಿ ಭದ್ರತೆ

Prasthutha|

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭಗೊಂಡಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ.

- Advertisement -


ರಾಜ್ಯದಾದ್ಯಂತ ಒಟ್ಟು 51,507 ಮತಗಟ್ಟೆಗಳನ್ನು ತೆರೆಯಲಾಗಿದೆ ಎಂದು ರಾಜಸ್ಥಾನ ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.


ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದು 5,25,38,105 ಮತದಾರರು ಇದ್ದಾರೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Join Whatsapp